ಶಿವಮೊಗ್ಗ: ನಗರದಲ್ಲಿ ಅಪರಿಚಿತ ವ್ಯಕ್ತಿ ಸಾವು: ವಾರಸುದಾರರ ಪತ್ತೆಗೆ ಪೊಲೀಸ್ ಪ್ರಕಟಣೆ
ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಪಂಚಮಿ ಹೊಟೇಲ್ ಪಕ್ಕದ ಫುಟ್ಪಾತ್ ಮೇಲೆ ಸುಸ್ತಾಗಿ ಮಲಗಿದ್ದ ಸುಮಾರು 35-40 ವರ್ಷದ ಅಪರಿಚಿತ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ. ಮೃತ ವ್ಯಕ್ತಿಯ ವಿಳಾಸ ಮತ್ತು ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಯಾರಿಗಾದರೂ ತಿಳಿದಲ್ಲಿ ಕೂಡಲೇ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ಅಥವಾ ಹತ್ತಿರದ ಪೊಲೀಸ್ ಕಂಟ್ರೋಲ್ ರೂಮ್ ಗೆ ತಿಳಿಸುವಂತೆ ಪ್ರಕಟಣೆ ಮೂಲಕ ಶುಕ್ರವಾರ ಅಧಿಕಾರಿಗಳು ತಿಳಿಸಿರುತ್ತಾರೆ.