ಶಿವಮೊಗ್ಗ: ಭದ್ರಾವತಿಯ ಅಂಗಡಿಯಲ್ಲಿ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ
ಮಂಜುನಾಥ ಆಟೊ ಸ್ಪೇರ್ಸ್ ಅಂಗಡಿಯ ರೋಲಿಂಗ್ ಶೆಟರ್‌ನ ಲಾಕ್ ಮೀಟಿ ಕನ್ನ ಹಾಕಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಯಕಿನ್ಸಾ ಕಾಲೋನಿ ನಿವಾಸಿಗಳಾದ ಸೈಯದ್ ಹುಸೇನ್ ಅಲಿಯಾಸ್ ಜಂಗ್ಲಿ (19), ಸೈಯದ್ ಇರ್ಫಾನ್ ಅಲಿಯಾಸ್ ಕಾಲು (21) ಬಂಧಿತರು. ಬಂಧಿತರಿಂದ 40 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.ಜೂನ್ 17ರ ರಾತ್ರಿ ಅಂಗಡಿಯ ಬಾಗಿಲು ಮೀಟಿ, ಡ್ರಾನಲ್ಲಿದ್ದ ನಗದು ಕಳವು ಮಾಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಹಳೇನಗರ ಠಾಣೆ ಪೊಲೀಸರು ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದರು.