ಸಿರವಾರ: ರಾಯಚೂರು : ಮೊಂಥಾ ಚಂಡಮಾರುತ ಎಫೆಕ್ಟ್, ಗುಡುಗು ಸಹಿತ ಮಳೆ ಮುನ್ಸೂಚನೆ
Sirwar, Raichur | Oct 29, 2025 ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೋಂಥಾ ಚಂಡಮಾರುತ ಎಫೆಕ್ಟ್ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾಳೆಯೂ ಬೀರಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ರಾಯಚೂರು ಸೇರಿ ಬೀದರ್, ಕಲಬುರ್ಗಿ, ಕೊಪ್ಪಳ, ಯಾದಗಿರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲೂ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದು ಹವಾಮಾನ ಇಲಾಖೆ ಮನವಿ ಮಾಡಿದೆ.