ಹಾಸನ: ಗಣೇಶ ಮೆರವಣಿಗೆ ವೇಳೆ ಅಪಘಾತ ಪ್ರಕರಣ: ಟ್ರಕ್ ಚಾಲಕ ಭುವನೇಶ್ ಹಾಸನದಿಂದ ಬೆಂಗಳೂರಿನ ಆಸ್ಪತ್ರೆಗೆ ರವಾನೆ
Hassan, Hassan | Sep 14, 2025 ಹಾಸನ :ಗಣೇಶ ಮೆರವಣಿಗೆ ಟ್ರಕ್ ಹರಿಸಿ ಹತ್ತು ಜನರ ಸಾವು ನೋವಿಗೆ ಕಾರಣದ ಭುವನೇಶ್ ನನ್ನು ಪೊಲೀಸರು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದಿಂದ ಬೆಂಗಳೂರಿಗೆ ಶಿಫ್ಟ್ ಮಾಡಿದ್ದಾರೆ. ಅಪಘಾತದಲ್ಲಿ ಭುವನೇಶ್ ಗೆ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಪೆಟ್ಟಾಗಿದ್ದರಿಂದ ಆತನನ್ನು ನಾಗಮಂಗಲದ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆಯಾದ ಹಿನ್ನೆಲೆ ಶನಿವಾರ ರಾತ್ರಿಯೇ ಡಿಸ್ಟಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ವಶಕ್ಕೆ ಪಡೆದ ಬಳಿಕ ತನಗೆ ಎದೆ ನೋವು ಕಾಣಿಸಿಕೊಂಡಿದೆ ಎಂದು ಹೇಳಿದ್ದರಿಂದ ಆತನನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು,ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಭುವನೇ