ಶಿರಸಿ : ತಾಲೂಕಿನ ಉತ್ತಮ ಸಹಕಾರಿ ನೌಕರ ಪ್ರಶಸ್ತಿಗೆ ತಾಲೂಕಿನ ಸಹಕಾರಿ ಕ್ಷೇತ್ರದ ಎಸ್ ಎನ್ ಹೆಗಡೆ ಅವರನ್ನು ಆಯ್ಕೆ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಕುಮಟಾ ಇವರು ಜಿಲ್ಲೆಯಲ್ಲಿ ಸಹಕಾರಿ ಸಂಘದ ಏಳಿಗಾಗಿ ಶ್ರಮಿಸಿ ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಸನ್ಮಾನಿಸಿ ಗೌರವಿಸುತ್ತಿದ್ದು, ಪ್ರಸಕ್ತ ವರ್ಷ ಶಿರಸಿ ತಾಲೂಕಿನ ಉತ್ತಮ ಸಹಕಾರಿ ನೌಕರ ಪ್ರಶಸ್ತಿಗೆ ತಾಲೂಕಿನ ದೊಡ್ಡಳ್ಳಿಯ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ಇದರ ನಿವೃತ್ತ ನೌಕರರು ಹಾಗು ಇದೇ ಸಂಘದ ಹಾಲಿ ಅದ್ಯಕ್ಷರು ಮತ್ತು ಸಾಮಾಜಿಕ ಕಾರ್ಯಕರ್ತರಾಗಿರುವ ಎಸ್ ಎನ್ ಹೆಗಡೆ ದೊಡ್ನಳ್ಳಿ ಇವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಗುರುವಾರ ಸಂಜೆ 5.30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.