ಬೆಂಗಳೂರು ಉತ್ತರ: 79ನೇ ಸ್ವಾತಂತ್ರ್ಯೋತ್ಸವ: ಮಾಣಿಕ್ ಶಾ ಪರೇಡ್ ಮೈದಾನನಲ್ಲಿ ಕಾರ್ಯಕ್ರಮದ ಕುರಿತು ಜಂಟಿ ಪತ್ರಿಕಾಗೋಷ್ಠಿ
79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದ ಕುರಿತು ಪತ್ರಿಕಾಘೋಷ್ಠಿ ನಡೆಯಿತು.ಪೂರ್ವಭಾವಿ ಸಿದ್ಧತೆಗಳ ಕುರಿತು ಆಗಸ್ಟ್ 13ರಂದು ಬೆಳಿಗ್ಗೆ 11 ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಗದೀಶ್ ಅವರು ವಿವರಣೆ ನೀಡಿದರು.