ವಸತಿಹೀನ ಕುಷ್ಠರೋಗಿಗಳಿಗೆ ಮನೆ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳು ಕಲಬುರಗಿ ಶೇಖರೋಜಾ ಸರ್ವೆ ನಂ.30ರಲ್ಲಿ 1 ಎಕರೆ 18 ಗುಂಟೆ ಜಮೀನನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ಆಯುಕ್ತ ಅವಿನಾಶ ಶಿಂದೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಯೋಜನೆ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದರು.