ದಾಂಡೇಲಿ : ಅಗಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಶಾಮನೂರ ಶಿವಶಂಕರಪ್ಪ ಹಾಗೂ ಐ.ಎ.ಎಸ್ ಅಧಿಕಾರಿ ಮಹಾಂತೇಶ ಬೀಳಗಿಯವರಿಗೆ ನಗರದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಶುಕ್ರವಾರ ಸಂಜೆ 7:30 ಗಂಟೆ ಸುಮಾರಿಗೆ ದಾಂಡೇಲಿಯ ಕೋಗಿಲಬನದ ಶ್ರೀ ಮೃತ್ಯುಂಜಯ ಮಠದಲ್ಲಿ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು. ಆರಂಭದಲ್ಲಿ ಅಗಲಿದ ಈ ಇಬ್ಬರು ಮಹನೀಯರ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿ ಪುಷ್ಪ ಗೌರವವನ್ನು ಸಲ್ಲಿಸಲಾಯಿತು. ಆ ಬಳಿಕ ಎರಡು ನಿಮಿಷಗಳ ಕಾಲ ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.