ಬೆಂಗಳೂರಿನ ಜೆ.ಪಿ. ಭವನದಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಎಂ. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಪಕ್ಷದ ರಾಜ್ಯ ಮಹಿಳಾ ಘಟಕದ ಸಭೆ ನಡೆಯಿತು. ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಮಹಿಳಾ ಘಟಕವನ್ನು ಇನ್ನಷ್ಟು ಬಲಪಡಿಸುವುದು, ಸಂಘಟನಾತ್ಮಕ ವಿಚಾರಗಳು ಹಾಗೂ ಹೊಸ ಜವಾಬ್ದಾರಿಗಳನ್ನು ವಹಿಸುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಈ ಸಭೆಯಲ್ಲಿ ಮಾಜಿ ಸಚಿವರು ಹಾಗೂ ರಾಜ್ಯ ಮಹಿಳಾ ಘಟಕದ ಗೌರವಾಧ್ಯಕ್ಷರಾದ ಶ್ರೀಮತಿ ಲೀಲಾದೇವಿ ಆರ್. ಪ್ರಸಾದ್, ಹಿರಿಯ ನಾಯಕರು ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರಾದ ಶ್ರೀ ಕೆ.ಎ. ತಿಪ್ಪೇಸ್ವಾಮಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರಶ್ಮೀ ರಾಮೇಗೌಡ ಸೇರಿದಂತೆ ವಿವಿಧ ಜಿಲ್ಲೆಗಳ ಮಹಿಳಾ ಘಟಕದ ಅಧ್ಯಕ್ಷರುಗಳು ಭಾಗವಹಿಸಿದ್ದರು.