ಸಕಲೇಶಪುರ: ಸಕಲೇಶಪುರ ಹೆದ್ದಾರಿ 75 ಅಪಘಾತಗಳಿಗೆ ಶಾಶ್ವತ ಪರಿಹಾರ: ಶಾಸಕ ಸಿಮೆಂಟ್ ಮಂಜು ಭರವಸೆ
ಸಕಲೇಶಪುರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹೆಚ್ಚುತ್ತಿರುವ ಅಪಘಾತಗಳ ತಡೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯುವುದಾಗಿ ಶಾಸಕ ಸಿಮೆಂಟ್ ಮಂಜು ತಿಳಿಸಿದ್ದಾರೆ. ಗುಲಗಳಲೆ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.