ಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಬುಧವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂವಿಧಾನ ದಿನಾಚರಣೆ ಕಾರ್ಯಕ್ರಮವು ಭವ್ಯವಾಗಿ ನೆರವೇರಿತು. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಂವಿಧಾನದ ಪೀಠಿಕೆಗೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಕಾನೂನು ಸಚಿವ ಎಚ್.ಕೆ. ಪಾಟೀಲ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿ.ಕೆ. ಸೋರಕೆ, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಶಾಸಕರು, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ, ಕಾನೂನು ಘಟಕದ ರಾಜ್ಯಾಧ್ಯಕ್ಷ ಸಿ.ಎಂ. ಧನಂಜಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.