ಚಿತ್ರದುರ್ಗದ ಐಮಂಗಲ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಒರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಐಮಂಗಲ ಸಮೀಪದ ಹೈವೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತಮಿಳುನಾಡು ಮೂಲದ ಅನಿತ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಾಲಾಜಿ ಎಂಬಾತನಿಗೆ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರು ಚಾಲಕನ ಅತಿವೇಗ & ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಐಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ