ಹೊನ್ನಾಳ್ಳಿ: ಜಿ.ಎಸ್.ಟಿ ದರ ಕಡಿಮೆ: ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿ, ಜಿ.ಎಸ್.ಟಿ ದರ ಕಡಿಮೆ ಮಾಡಿರುವುದಾಗಿ ತಿಳಿಸಿದರು. ಪ್ರಧಾನ ಮಂತ್ರಿಗಳು ಜಿ.ಎಸ್.ಟಿ ದರ ಕಡಿಮೆಯಿಂದ ಮಾಡಿರುವುದರಿಂದ ಜನಸಾಮಾನ್ಯರಿಗೆ ಅನುಕೂಲವಾಲಿದೆ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೋಮವಾರ ಹೊನ್ನಾಳಿ ನ್ಯಾಮತಿ ಬಿಜೆಪಿ ಮಂಡಲ ವತಿಯಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಸೇರಿದಂತೆ ಇತರರು ಇದ್ದರು.