ದಾಂಡೇಲಿ : ಐತಿಹಾಸಿಕ ಉ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ದಾಂಡೇಲಿ ನಗರದ ಹಳೆ ನಗರಸಭೆಯ ಮೈದಾನದಲ್ಲಿ ನಾಳೆ ಡಿ. 13 ರಿಂದ 15 ರವರೆಗೆ ನಡೆಯಲಿರುವ ರಜತ ಸಂಭ್ರಮದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವ ಸಿದ್ಧತೆಗಳನ್ನು ನಡೆಸಲಾಗಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್ ವಾಸರೆಯವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು, ಎಲ್ಲ ರಾಜಕೀಯ ಪಕ್ಷದ ಮುಖಂಡರು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಸಮ್ಮೇಳನದ ಯಶಸ್ಸಿಗೆ ತೊಡಗಿಸಿಕೊಂಡಿದ್ದಾರೆ.