ಪ್ರವಾಹ ಪೀಡಿತ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡುತ್ತೇವೆ ಕುಮಸಗಿ ಗ್ರಾಮದಲ್ಲಿ ಸಚಿವ ಎಂಬಿ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ
ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುಮಸಗಿ ನೆರೆಹಾವಳಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ವೀಕ್ಷಣೆ ಮಾಡಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡುತ್ತಾ, ಅತಿವೃಷ್ಟಿ ಆದ ಪ್ರದೇಶಗಳಿಗೆ ಇಂದು ವೀಕ್ಷಣೆ ಮಾಡಿದ್ದು ಗ್ರಾಮಗಳಲ್ಲಿ ಕಾಳಜಿ ಕೇಂದ್ರಗಳನ್ನು ಸಹ ನಿರ್ಮಾಣ ಮಾಡಿದ್ದೇವೆ, ಇನ್ನು ನೆರೆ ಸಂತ್ರಸ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಕೊಡುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಲು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪರಿಹಾರವನ್ನು ನೀಡುತ್ತೇವೆ ಮತ್ತು ನದಿ ದಂಡೆಯ ನಿವಾಸಿಗಳನ್ನು ಬೇರೆ ಕಡೆ ಸ್ಥಳಾಂತರ ಮಾಡುತ್ತೇವೆ ಎಂದು ಸಚಿವ ಎಂಬಿ ಪಾಟೀಲ್ ಮಾಧ್ಯಮಕ್ಕೆ ಹೇಳಿಕೆ ನೀಡಿದರು.