ಚಿತ್ರದುರ್ಗ: ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಯಾತ್ರೆಯಲ್ಲಿ 50 ಕ್ಕೂ ಹೆಚ್ಚು ಮೊಬೈಲ್ ಕಳವು
ಶನಿವಾರ ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ಬೃಹತ್ ಶೋಭಯಾತ್ರೆಯಲ್ಲಿ 50 ಕ್ಕೂ ಹೆಚ್ಚು ಮೊಬೈಲ್ ಗಳು ಕಳ್ಳತನವಾಗಿರುವ ವಿಚಾರ ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಬೆಳಕಿಗೆ ಬಂದಿದೆ. ಪೊಲೀಸ್ ಇಲಾಖೆ ಸೈಬರ್ ವಿಭಾಗದ ಅಂಕಿ ಅಂಶಗಳ ಪ್ರಕಾರ 41 ಮಂದಿ ಆನ್ ಲೈನ್ ಮೂಲಕ ಮೊಬೈಲ್ ಕಳವು ಆಗಿರುವ ಕುರಿತು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅಲ್ಲದೆ ಎರಡು ಬಂಗಾರದ ಚೈನ್ ಹಾಗೂ ಒಂದು ಪರ್ಸ್ ಕೂಡಾ ಕಳ್ಳತನ ಮಾಡಲಾಗಿದೆ. ಪೊಲೀಸರ ಕಟ್ಟೆಚ್ಚರ ಹಾಗೂ ಸಿಸಿಟಿವಿ ಕಣ್ಗಾವಲು ನಡುವೆಯೂ ಕಳ್ಳರು ತಮ್ಮ ಕೈಚಳಕ ತೋರಿ ಮೊಬೈಲ್ ಗಳನ್ನ ಎಗರಿಸಿದ್ದಾರೆ