ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಶಿಕ್ಷಕರೆಲ್ಲರೂ ನೋಂದಣಿ ಮಾಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ್ ಅವರು ಹೇಳಿದರು. ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ- 2026ರ ಮತದಾರರ ವಿಶೇಷ ಮಿಂಚಿನ ನೋಂದಣಿ ಮೂರನೇ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮತದಾರರ ಪಟ್ಟಿಗೆ ಸೇರ್ಪಡೆಗೆ ಅರ್ಹತೆ ಪಡೆದ ಯಾರು ಸಹ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಅದಕ್ಕಾಗಿ ನಮೂನೆ 19ನ್ನು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಹೇಳಿದರು.