ತುಮಕೂರು: ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ಜಿಪಂ ಸಿಇಒ ಜಿ. ಪ್ರಭು ಭಾಗಿ
ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯು ನನ್ನ ಮತ, ನನ್ನ ಹಕ್ಕು ಶೀರ್ಷಿಕೆಯಡಿ ನಡೆಯಿತು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಮಧ್ಯಾಹ್ನ 1 ರ ಸಮಯದಲ್ಲಿ ಈ ಸಮಾರಂನಡೆಯಿತು.ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಮಾತನಾಡಿ, ಸಂವಿಧಾನ ಕೊಟ್ಟ ಅವಕಾಶದಿಂದಲೇ ಈ ಹುದ್ದೆ ಅಲಂಕರಿಸಲು ಸಾಧ್ಯವಾಯಿತು ಎಂದರು. ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಮಾತನಾಡಿ, ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ, ಮೀಸಲಾತಿ ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ನೀವು ಉನ್ನತ ಹುದ್ದೆ ಗಳಿಸಬಹುದು ಎಂದರು.