ಬಳ್ಳಾರಿ: ಬಳ್ಳಾರಿ ತಾಲೂಕು ಕಚೇರಿಗೆ ಶಾಸಕ ನಾರಾ ಭರತರೆಡ್ಡಿ ಭೇಟಿ: ಅಧಿಕಾರಿಗಳಿಗೆ ಎಚ್ಚರಿಕೆ
ಬಳ್ಳಾರಿ ತಾಲೂಕು ಕಚೇರಿಗೆ ಶಾಸಕ ನಾರಾ ಭರತರೆಡ್ಡಿ ಭೇಟಿ ನೀಡಿ ಕಡತಗಳ ವಿಲೇವಾರಿ ಮತ್ತು ಸಾರ್ವಜನಿಕ ಸೇವೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಕಚೇರಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಿ, ನಿಗದಿತ ಕಾಲಮಿತಿಯೊಳಗೆ ಕೆಲಸಗಳನ್ನು ಮುಗಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.