ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಲಘು ಪ್ರಮಾಣದ ಗುಡ್ಡ ಕುಸಿತ
ಪುನರ್ವಸು ಮಳೆಯ ಅಬ್ಬರ ಹೆಚ್ಚಾಗಿದ್ದು ಅತೀ ಹೆಚ್ಚು ಮಳೆ ಬೀಳುವ ಪ್ರದೇಶವಾಗಿರುವ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಲಘು ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ.ಈಗಾಗಲೇ ಭಾರಿ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದ್ದು ತೀರ್ಥಹಳ್ಳಿ - ಉಡುಪಿ ಮಾರ್ಗವಾಗಿ ಹೋಗುವ ವಾಹನಗಳು ಆಗುಂಬೆ ಮಾರ್ಗವಾಗಿ ಹೋಗುತ್ತಿವೆ. ಭಾನುವಾರ ಆಗುಂಬೆ ಘಾಟಿಯ 5 ನೇ ತಿರುವಿನಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿಯಲು ಆರಂಭವಾಗಿದ್ದು ವಾಹನ ಸವಾರರು ಎಚ್ಚರಿಕೆವಹಿಸಬೇಕಿದೆ.ಕಳೆದ ಮೂರು ವರ್ಷಗಳ ಹಿಂದೆ ಕೂಡ ಆರನೇ ಸುತ್ತಿನಲ್ಲಿ ಘಾಟಿ ಕುಸಿದಿತ್ತು. ಘಾಟಿ ಕುಸಿದ ಪರಿಣಾಮ ಸಂಚಾರ ಬಂದ್ ಆಗುವ ಸಾಧ್ಯತೆ.ಇನ್ನಷ್ಟು ಘಾಟಿ ಕುಸಿಯುವ ಸಾಧ್ಯತೆ ಇದೆ. ಈಗಾಗಲೇ ತೆರವು ಕಾರ್ಯಾಚರಣೆ ಆರಂಭವಾಗಿದೆ