ಕಂಪ್ಲಿ: ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಢಿಕ್ಕಿ ಹೊಡೆದ ಕಾರು
Kampli, Ballari | Oct 22, 2025 ಕಂಪ್ಲಿ ಪಟ್ಟಣದ ಸಣಾಪುರ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಢಿಕ್ಕಿ ಹೊಡೆದ ಘಟನೆ ಅಕ್ಟೋಬರ್ 22, ಬುಧವಾರ ಮಧ್ಯಾಹ್ನ 12:20ಕ್ಕೆ ಸಂಭವಿಸಿದೆ. ಕಾರು ಬಲವಾಗಿ ಢಿಕ್ಕಿ ಹೊಡೆದ ಪರಿಣಾಮ ಚಾಲಕನ ತಲೆಗೆ ಪೆಟ್ಟು ಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಕಂಪ್ಲಿ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.