ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ನಡೆದ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ಮಳವಳ್ಳಿ : ತಾಲ್ಲೂಕಿನ ಕಲ್ಕುಣಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಜರುಗಿತು. ಮಂಗಳವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಏರ್ಪಾಡಾಗಿದ್ದ ಸಭೆಯಲ್ಲಿ ವಾರ್ಷಿಕ ವರದಿ ಮಂಡಿಸಿದ ಸಂಘದ ಕಾರ್ಯದರ್ಶಿ ಸಿದ್ದರಾಜು ಅವರು ಸಹಕಾರ ಸಂಘವು 2024-25ನೇ ಸಾಲಿಗೆ ಒಟ್ಟು 1.98.476 ರೂ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಮನ್ ಮುಲ್ ನಿರ್ಧೇಶಕ ಡಿ ಕೃಷ್ಣೇಗೌಡ ಅವರು ಶಾಸಕ ಪಿ ಎಂ ನರೇಂದ್ರಸ್ವಾಮಿ ಅವರ ಆಶಯ ದಂತೆ ತಾಲ್ಲೂಕಿನ ಎಲ್ಲಾ ಡೈರಿಗ ಳನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಹಾಲು ಉತ್ಪಾದಕ ರೈತರ ಆರ್ಥಿಕ ಪ್ರಗತಿಗೆ ಶ್ರಮಿಸುವುದು ನನ್ನ ಗುರಿ ಎಂದರು.