ಹನೂರು:ಹನೂರು ತಾಲೂಕಿನ ವಡೆಕಹಳ್ಳ ಗ್ರಾಮದಲ್ಲಿ ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತನೀರಾವರಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಧರಣಿ 43ನೇ ದಿನಕ್ಕೂ ಕಾಲಿಟ್ಟಿದ್ದು ಸೋಮವಾರದ ಧರಣಿದಲ್ಲಿ ಕೆಆರ್ಎಸ್ ಸಂಘಟನೆಯ ವಿವಿಧ ಜಿಲ್ಲೆಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ನಡೆ ಖಂಡಿಸಿದರು ಕಾರ್ಯಕ್ರಮದಲ್ಲಿ ಕೆಆರ್ಎಸ್ ಪಕ್ಷದ ಮುಖಂಡರು ಮಾತನಾಡಿ ಅಕ್ಟೋಬರ್ 27ರಿಂದ ಈ ಭಾಗದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತನೀರಾವರಿ ಸೌಲಭ್ಯ ಒದಗಿಸಲು, ಹಾಗೂ ಬ ಉಳಿದ ಸಮಸ್ಯೆಗಳನ್ನು ಬಗೆಹರಿಸಲು ನೆಡೆಸುತ್ತಿರುವ ಧರಣಿ 43 ದಿನಕ್ಕೆ ಕಾಲಿಟ್ಟಿದ್ದರೂ ಸರ್ಕಾರ ಯಾವುದೇ ಪ್ರಯೋಜನವಾಗಿಲ್ಲ ಎಂದರು