ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಾರ್ತೀಕ ಮಾಸದ ಹಿನ್ನೆಲೆಯಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನೆರವೇರಿತು. ಶ್ರೀ ರಾಘವೇಂದ್ರ ಸ್ವಾಮಿಗಳ ಪೀಠಾಧಿಪತಿ ಸುಭುದೇಂದ್ರ ತೀರ್ಥರ ಅಧ್ಯಕ್ಷತೆಯಲ್ಲಿ ಮಠದಿಂದ ಪರಿಮಳ ತೀರ್ಥ ಪುಷ್ಕರಣಿಯವರೆಗೆ ಶ್ರೀ ಪ್ರಹ್ಲಾದರಾಜ ಉತ್ಸವ ಮೂರ್ತಿಯೊಂದಿಗೆ ಶ್ರೀ ಸ್ವಾಮೀಜಿ ಭವ್ಯ ಮೆರವಣಿಗೆಯೊಂದಿಗೆ ಆಗಮಿಸಿದರು. ಮಂಗಳವಾರ 8:00ಗೆ ನಡೆದ ತೆಪ್ಪೋತ್ಸವ ಕಾರ್ಯಕ್ರಮದಲ್ಲಿ ಅನೇಕ ಭಕ್ತರು ಈ ದಿವ್ಯ ಕಾರ್ಯಕ್ರಮವನ್ನು ವೀಕ್ಷಿಸಿ ಆಶೀರ್ವಾದಗಳನ್ನು ಪಡೆದರು.