ಸಿಂಧನೂರು ನಗರದ ಲೇಔಟ್ ಒಂದರಲ್ಲಿ ಶವ ಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿದ ಸಿಂಧನೂರು ನಗರ ಪೊಲೀಸ್ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಶ್ವಾನದಳ ಸ್ಥಳಕ್ಕೆ ತೆರಳಿ ತಪಾಸಣೆ ಮಾಡಿವೆ, ಕೊಲೆ ಮಾಡಿದ ಆರೋಪಿಗಳು ಶವ ಬೀಸಾಡಿರುವ ಬಗ್ಗೆ ಖಚಿತ ಪಡಿಸಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿ ತನಿಖೆ ಆರಂಬಿಸಲಾಗಿದೆ ಎಂದು ರಾಯಚೂರು ಎಸ್ಪಿ ಪುಟ್ಟಮಾದಯ್ಯ ಹೇಳಿದರು.