ಬೆಂಗಳೂರು ಉತ್ತರ: ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ಗೃಹ ಕಚೇರಿಯಲ್ಲಿ ಆಯುಧಪೂಜೆ
"ಯಾ ದೇವೀ ಸರ್ವಭೂತೇಷು ಶಕ್ತಿರೂಪೇಣ ಸಂಸ್ಥಿತಾ। ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ॥" ಎಂಬ ದೇವಿ ಸ್ತೋತ್ರದೊಂದಿಗೆ ಬುಧವಾರ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ಗೃಹ ಕಚೇರಿಯಲ್ಲಿ ಆಯುಧಪೂಜಾ ಕೈಂಕರ್ಯಗಳನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ವಾಹನಗಳಿಗೆ ಪೂಜೆ ಸಲ್ಲಿಸಿ, ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಸರ್ವರಿಗೂ ಒಳಿತಾಗಲೆಂದು ಪ್ರಾರ್ಥಿಸಲಾಯಿತು. ಭಕ್ತಿಪೂರ್ಣ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಕಾರ್ಯಕರ್ತರು, ಕುಟುಂಬ ಸದಸ್ಯರು ಹಾಗೂ ಅತಿಥಿಗಳು ಪಾಲ್ಗೊಂಡರು.ಪೂಜೆಯ ಬಳಿಕ ಸಾಂಪ್ರದಾಯಿಕ ವಿಧಾನದಲ್ಲಿ ಪ್ರಸಾದ ವಿತರಣೆ ನಡೆ