ಯಲ್ಲಾಪುರ : ಪಟ್ಟಣದ ರಾಮಾಪುರ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಭೇಟಿ ನೀಡಿದರು. ವಿದ್ಯಾರ್ಥಿಗಳ ಜತೆ ಶೈಕ್ಷಣಿಕ ಚಟುವಟಿಕೆಗಳ ಕುರಿತು ಸಂವಾದ ನಡೆಸಿದರು. ಇದೇ ವೇಳೆ ಶಾಲೆಯ ಬಿಸಿಯೂಟ ಕೋಣೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಿಬ್ಬಂದಿಗೆ ಹಾಗೂ ಶಿಕ್ಷಕರಿಗೆ ಸೂಚನೆ ನೀಡಿದರು. ನಂತರ ಕಾಳಮ್ಮನಗರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಅವರು, ಪಡಿತರ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.