ಚಿಕ್ಕಪೇಟೆಯ ಬಿವಿಕೆ ಅಯ್ಯಂಗಾರ್ ಮುಖ್ಯರಸ್ತೆಯಲ್ಲಿ ಮಂಗಳಮುಖಿಯರು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಣ ಕೇಳುವ ನೆಪದಲ್ಲಿ ಜನಸಂದಣಿಯಲ್ಲಿ ಅಸಭ್ಯವಾಗಿ ವರ್ತಿಸಿ, ಹಣ ನೀಡದಿದ್ದರೆ ಪರ್ಸ್ ಕಿತ್ತುಕೊಂಡು, ಬಟ್ಟೆಬಿಚ್ಚಿ ನಿಂದನೆ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಸ್ಥಳೀಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಮತ್ತು ಮೊಬೈಲ್ನಲ್ಲಿ ಸೆರೆಯಾಗಿದೆ.