ತೋರಗನದೊಡ್ಡಿ ಯಲ್ಲಿ ಬಾವಿಗೆ ಬಿದ್ದಿದ ನಾಯಿಯ ರಕ್ಷಣೆ ಮಾಡಿದ ಅಗ್ನಿ ಶಾಮಕ ಸಿಬ್ಬಂದಿ ನಾಲ್ಕೈದು ದಿನಗಳಿಂದ ಅನ್ನ ಆಹಾರವಿಲ್ಲದೆ ತೊರಗನದೊಡ್ಡಿ ಗ್ರಾಮದ ಹೊರವಲಯದ ಪಾಳುಬಾವಿಯಲ್ಲಿ ಬಿದ್ದಿದ್ದ ಶ್ವಾನವನ್ನ ಸೋಮವಾರ ಬೆಳಗ್ಗೆ 11 ಗಂಟೆಯಲ್ಲಿ ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ ಸ್ಥಳೀಯ ನಿವಾಸಿಗಳ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ನಾಯಿಯನ್ನು ಬಾವಿಯಿಂದ ಮೇಲೆತ್ತಿ ರಕ್ಷಣೆ ಮಾಡಿದ್ದು ಈ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ