ಹುಬ್ಬಳ್ಳಿ ನಗರ: ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮ: ನಗರದಲ್ಲಿ ಕೆ.ಎಲ್.ಇ ನಿರ್ದೇಶಕ ಶಂಕರಣ್ಣಾ ಮುನವಳ್ಳಿ
ಹುಬ್ಬಳ್ಳಿ: ಸತತವಾಗಿ ಎಂಟು ಬಾರಿ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಿಂದ ದಾಖಲೆಯ ಗೆಲುವು ಸಾಧಿಸಿ ೪೫ ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿ ಪ್ರಸ್ತುತ ವಿಧಾನ ಪರಿಷತ್ ಸಭಾಪತಿಗಳಾಗಿರುವ ಬಸವರಾಜ ಹೊರಟ್ಟಿ ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿಂದು ಸಂಜೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಲ್.ಇ ನಿರ್ದೇಶಕ ಹಾಗೂ ಕಾರ್ಯಕ್ರಮದ ಆಯೋಜಕರಾದ ಶಂಕರಣ್ಣಾ ಮುನವಳ್ಳಿ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಸಂತೋಷ್ ಲಾಡ್ ಸೇರಿದಂತೆ ರಾಜ್ಯದ ಸಚಿವರು, ಶಾಸಕರುಗಳು ಸೇರಿದಂತೆ ಮೊದಲಾದವರು ಆಗಮಿಸಲಿದ್ದಾರೆ.