ಶಿರಸಿ ನಗರದಲ್ಲಿ ಬುಧವಾರ ಸಂಜೆ 4.30ರ ಸುಮಾರು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಅವರು ಬೇಡ್ತಿ-ವರದಾ ನದಿ ತಿರುವು ಯೋಜನೆಯನ್ನು ಹಾವೇರಿ ಭಾಗದ ಜನರ ಕುಡಿಯುವ ನೀರಿಗಾಗಿ ಎಂದು ಸುಳ್ಳು ಹೇಳಿ ಜನರ ದಿಕ್ಕು ತಪ್ಲಿಸುವ ಕೆಲಸ ಆಗಿದೆ, ಅಸಲಿಯಾಗಿ ಇದು ಕುಡಿಯುವ ನೀರಿನ ಯೋಜನೆಯೇ ಅಲ್ಲ, ಜೊತೆಗೆ ಸರಕಾರದ ವೆಬ್ಸೈಟ್ ನಲ್ಲಿ ದೊರೆತ ದಾಖಲೆಗಳ ಪ್ರಕಾರ ರಾಯಚೂರು ಜಿಲ್ಲೆಗೆ ನೀರಾವರಿಗೆ ಎಂದು ಈ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದರು.