ಶಿವಮೊಗ್ಗ: ನಿರಂತರ ಮಳೆಗೆ ಹಾರನಹಳ್ಳಿಯ ಮನೆಯೊಂದರ ಗೋಡೆ ಕುಸಿತ
ಶಿವಮೊಗ್ಗ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿರುವಾಗ ಘಟನೆ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಾರನಹಳ್ಳಿ ನಿವಾಸಿ ನವೀದ್ ಎಂಬುವವರ ಮನೆಯ ಒಂದು ಬದಿಯ ಗೋಡೆ ನಿರಂತರ ಮಳೆಯಿಂದಾಗಿ ಮಂಗಳವಾರ ಕುಸಿದಿದೆ.ಅದೃಷ್ಟವಶಾತ್ ಈ ಘಟನೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನಷ್ಟು ಮಳೆಯಾದರೆ ಮನೆ ಸಂಪೂರ್ಣ ಹಾನಿಯಾಗುವ ಸಾಧ್ಯತೆ ಇದೆ.ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.