ನ್ಯಾಮತಿ: ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ, ಕಲಾತಂಡಗಳ ಮೆರವಣಿಗೆ
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಶ್ರೀ ಸಂತ ಸೇವಾಲಾಲ್ ಅವರ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದ ಪ್ರಯುಕ್ತ ಕಲಾತಂಡಗಳ ಮೆರವಣಿಗೆ ನಡೆಯಿತು. ಸೇವಾಲಾಲ್ ಅವರ ಜಯಂತಿ ಕಾರ್ಯಕ್ರಮಕ್ಕೆ ರಾಜ್ಯದ ಜಿಲ್ಲೆಗಳು ಸೇರಿದಂತೆ ಹೊರ ರಾಜ್ಯಗಳಿಂದ ಬಂಜಾರ ಸಮುದಾಯ ಬಾಂಧವರ ಜನಸ್ತೋಮವೆ ಹರಿದು ಬರುತ್ತಿದೆ. ಜಯಂತಿ ಪ್ರಯುಕ್ತ ಗುರುವಾರ ಬೆಳಿಗ್ಗೆ 10 ಗಂಟೆಗೆ ನಡೆದ ಬೋಗ್ ಪೂಜೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಪಾಲ್ಗೊಂಡು, ಬಂಜಾರ ಸಮುದಾಯ ಬಾಂಧವರ ಜೊತೆ ಸೇರಿದಂತೆ ಭಜನೆ ಮಾಡಿದರು.