ಚನ್ನರಾಯಪಟ್ಟಣ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಚಿವ ಕೆ.ಎನ್ ರಾಜಣ್ಣ ಅಧ್ಯಕ್ಷತೆಯಲ್ಲಿ ಹೃದಯಘಾತದ ಬಗ್ಗೆ ಮಹತ್ವದ ಸಭೆ
ಹಾಸನ: ಹೃದಯಾಘಾತ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಪ್ರತೀ ವರ್ಷ ಎಲ್ಲಾ ಜಿಲ್ಲೆಗಳಲ್ಲಿ ಬಾಲ್ಯದಿಂದಲೇ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಿದ್ದು ಎಲ್ಲಾ ಆಸ್ಪತ್ರೆಗಳಲ್ಲಿಯೂ ಅದಕ್ಕೆ ಸಂಭಂದಿಸಿದ ಸೌಲಭ್ಯ ಒದಗಿಸಲು ಸರ್ಕಾರ ಸಿದ್ಧವಾಗಿದೆ ಎಂದು ಸಹಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ರಾಜಣ್ಣ ತಿಳಿಸಿದರು. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಪ್ರವಾಸಿ ಮಂದಿರದಲ್ಲಿ ಇಂದು ಮಾಧ್ಯಮಗಳಲ್ಲಿ ವರದಿಯಾಗಿರುವ ಹೃದಯಾಘಾತ ಮರಣಗಳ ವಾಸ್ತವಾಂಶ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ನಡೆದ ಹೃದಯಾಘಾತ ಎನ್ನಲಾದ ಪ್ರಕರಣಗಳ ಬಗ್ಗೆ ತನಿಖೆ ಹಾಗೂ ಮಾಹಿತಿ ಪಡೆಯಲು ಮುಂದಾಗಿದೆ ಎಂದರು.