ಬೆಳಗಾವಿ ಜನತೆಗೆ ಧನ್ಯವಾದ ಸಲ್ಲಿಸಿದ ಮೇಯರ್ ಪ್ರೀತಿ ಕಾಮಕರ
ಬೆಳಗಾವಿ ಗಣೇಶ ವಿಸರ್ಜನೆಯನ್ನು ಶಾಂತಿಯುತವಾಗಿ ಮತ್ತು ಮಾದರಿಯಾಗಿ ಆಚರಿಸಿದ್ದಕ್ಕಾಗಿ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪ್ರೀತಿ ಕಾಮಕರ ಅವರು ನಗರದ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಹಬ್ಬದ ಆಚರಣೆ ಇಡೀ ದೇಶಕ್ಕೇ ಮಾದರಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.