ಹಿರೇಕೆರೂರು: ರಟ್ಟಿಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ: ಸಚಿವ ರುದ್ರಪ್ಪ ಲಮಾಣಿ ಭಾಗಿ
ಹಾವೇರಿಯ ರಟ್ಟಿಹಳ್ಳಿ ಪಟ್ಟಣದಲ್ಲಿ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಸಭೆ ಜರುಗಿತು. ಸಚಿವ ರುದ್ರಪ್ಪ ಲಮಾಣಿ ಹಾಗೂ ಶಾಸಕ ಯು.ಬಿ. ಬಣಕಾರ್ ಭಾಗವಹಿಸಿ ಚುನಾವಣಾ ಪೂರ್ವಸಿದ್ಧತೆಯ ಬಗ್ಗೆ ಚರ್ಚಿಸಿದರು. ಈ ವೇಳೆ ಜಿಲ್ಲಾಧ್ಯಕ್ಷ ಸಂಜು ಕುಮಾರ್ ನೀಡಲಗಿ ಹಾಗೂ ಸ್ಥಳೀಯ ಪದಾಧಿಕಾರಿಗಳು ಉಪಸ್ಥಿತರಿದ್ದರು.