ಶಿವಮೊಗ್ಗ: ಜುಲೈ 21ರಂದು ನವಲಗುಂದದಲ್ಲಿ 44ನೇ ರೈತ ಹುತಾತ್ಮ ದಿನಾಚರಣೆ: ನಗರದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜಪ್ಪ
ಧಾರವಾಡ ಜಿಲ್ಲೆಯ ನವಲಗುಂದದಲ್ಲಿ 44ನೇ ರೈತ ಹುತಾತ್ಮ ದಿನಾಚರಣೆಯನ್ನು ಜು.21ರಂದು ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ. ಮತ್ತು ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮುಂದಿನ ಹೋರಾಟವನ್ನು ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು. ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಶುಕ್ರವಾರ ಸಂಜೆ 3 ಗಂಟೆಗೆ ಮಾತಾನಾಡಿದ ಅವರು ರೈತರ ಸಮಸ್ಯೆಗಳು ಸಾಕಷ್ಟಿವೆ. ಪ್ರಮುಖವಾಗಿವೆ. ಉತ್ತರ ಕರ್ನಾಟಕ ಭಾಗದ ರೈತರ ನೀರಾವರಿ ಮಹಾದಾಯಿ ಯೋಜನೆ ಎರಡು ದಶಕಗಳು ಕಳೆದರು ಜಾರಿಯಾಗಿಲ್ಲ ಎಂದರು.