ಹಳಿಯಾಳ : ಉ.ಕ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ಹಳಿಯಾಳ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಟಿಪ್ಪು ಶಹೀದ ಚಾರಿಟೇಬಲ್ ಟ್ರಸ್ಟ್ ಶಾದಿಮಹಲ್ ಸಮುದಾಯ ಭವನದ ಉದ್ಘಾಟನೆಯನ್ನು ಭಾನುವಾರ ಸಂಜೆ 05:00 ಸುಮಾರಿಗೆ ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ವಿ ದೇಶಪಾಂಡೆ ಅವರು ನೂತನ ಸಮುದಾಯ ಭವನವು ವಿವಾಹ ಸಮಾರಂಭಗಳು, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು,ಶೈಕ್ಷಣಿಕ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸಭೆಗಳಿಗೆ ಉಪಯುಕ್ತವಾಗಿದೆ ಎಂದರು.