ಶಿಡ್ಲಘಟ್ಟ: ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆ, ಅಂಗನವಾಡಿ ಕೇಂದ್ರ, ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ಸದಸ್ಯರು
ಯಾವುದೇ ವ್ಯಕ್ತಿ ಹಸಿವಿನಿಂದ ಬಳಲಬಾರದು ಎಂದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ನ್ನು ಜಾರಿಗೆ ತರಲಾಗಿದೆ. ಆದರೆ ಜಿಲ್ಲೆಯಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯ ಆಹಾರ ವಿತರಣೆ ಸೇರಿದಂತೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಮೆನು ಚಾರ್ಟ್ ಪ್ರಕಾರ ಆಹಾರ ವಿತರಣೆ ಆಗುತ್ತಿಲ್ಲ. ಯಾವ ತರಕಾರಿ, ಪದಾರ್ಥದ ಬೆಲೆಗಳು ಕಡಿಮೆ ಇರುತ್ತವೋ ಅದಕ್ಕೆ ಪೂರಕವಾಗಿ ಅಡುಗೆ ತಯಾರು ಮಾಡಿ ಆಹಾರ ನೀಡಲಾಗುತ್ತಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಬಿಸಿ ನೀರಿನ ವ್ಯವಸ್ಥೆ ಇಲ್ಲ,ಊಟದ ಕೋಣೆ ಇಲ್ಲ, ಶೌಚಾಲಯದಲ್ಲಿ ಸ್ವಚ್ಚತೆ ಕಾಪಾಡಿಲ್ಲ, ವಸತಿ ಶಾಲೆಗಳಲ್ಲಿ ಗ್ರಂಥಾಲಯಗಳಿಲ್ಲ ಈ ಎಲ್ಲ ಸಮಸ್ಯೆಗಳು ನಿವಾರಣೆ ಆಗಬೇಕು ಎಂದು ಸೂಚನೆ ನೀಡಿರುವುದಾಗಿ ತಿಳಿಸಿದರು. ಜಿಲ್ಲೆಯ ಹಲವಾರು KFC ಉಗ್ರಾಣಗಳಲ್ಲಿ ಆಹಾರ ಸಂಗ್ರಹಣೆ ಪ್ರಮ