ಕೃಷ್ಣರಾಜಪೇಟೆ: ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ
ಕೃಷ್ಣರಾಜಪೇಟೆ ಪಟ್ಟಣದ ರಾಮದಾಸ್ ಹೋಟೆಲ್ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಿಕ್ಕೇರಿ ತಾಲೂಕು ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚು ಗ್ರಾಮೀಣ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮವನ್ನು ತಹಶೀಲ್ದಾರ್ ಅಶೋಕ್ ಜ್ಯೋತಿ ಬೆಳಗಿಸಿಸುವ ಮೂಲಕ ಉದ್ಘಾಟಿಸಿದರು. ನಂತರ ತಹಶೀಲ್ದಾರ್ ಅಶೋಕ್ ಅವರು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರೈತರ ಕಲ್ಯಾಣ ಹಾಗೂ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ಕೆಲಸ ಮಾಡುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ರೈತರ ಕಲ್ಯಾಣ ಹಾಗೂ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕಾಗಿ ದುಡಿಯುತ್ತಿದೆ ಎಂದು ಗುರುವಾರ ಸಂಜೆ 4 ಗಂಟೆಯಲ್ಲಿ ಹೇಳಿದರು.