ರಾಮನಗರ: ಮಾಗಡಿ ವಕೀಲರ ಸಂಘದ ವತಿಯಿಂದ ರಾಜಭವನದಲ್ಲಿ ರಾಜ್ಯಪಾಲರ ಭೇಟಿ, ಮನವಿ ಸಲ್ಲಿಕೆ
ಬೆಂಗಳೂರು ಗ್ರಾಮಾಂತರ ಲೋಕಸಭಾ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಮಾಗಡಿ ವಕೀಲರ ಸಂಘದ ಸದಸ್ಯರೊಂದಿಗೆ ರಾಜಭವನದಲ್ಲಿ ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ತವರ್ಚಂದ್ ಗೆಹಲಾಟ್ ಅವರನ್ನು ಮಂಗಳವಾರ ಭೇಟಿಯಾಗಿದ್ದರು. ಸೋಲೂರು ಹೋಬಳಿಯನ್ನು ಮಾಗಡಿ ತಾಲೂಕಿನ ಆಡಳಿತ ವ್ಯಾಪ್ತಿಯಲ್ಲಿಯೇ ಉಳಿಸುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಗಡಿ ವಕೀಲರ ಸಂಘದ ಅಧ್ಯಕ್ಷ ಶ್ರೀ ಆರ್. ಸುರೇಶ್, ಉಪಾಧ್ಯಕ್ಷ ಶ್ರೀ ರಾಜಯ್ಯ, ಜಂಟಿ ಕಾರ್ಯದರ್ಶಿ ಶ್ರೀಮತಿ ಎಚ್. ಸಹನಾ ಪಂಡಿತ್ ಉಪಸ್ಥಿತರಿದ್ದರು.