ಶಿವಮೊಗ್ಗ: ಕೊಲೆ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಇಬ್ಬರಿಗೆ ಮತ್ತೊಂದು ಪ್ರಕರಣದಲ್ಲಿ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ಶಿವಮೊಗ್ಗ ನ್ಯಾಯಾಲಯ
ಶಿವಮೊಗ್ಗ ನಗರದ ವಾದಿಯೇ ಹುದಾ ಬಡಾವಣೆಯಲ್ಲಿ ಮೊಹಮದ್ ಜೈಧಾನ್ ಎಂಬುವರ ಕೊಲೆ ಪ್ರಕರಣದ ಆರೋಪಿಗಳಾದ ಮೊಹಮ್ಮದ್ ನಾಖೇಶ್ ಮತ್ತು ಅಬು ಸಲೇಹ್ ಎಂಬುವರಿಗೆ ಜೀವಾವಧಿ ಶಿಕ್ಷೆಯಾಗಿತ್ತು ಇದೇ ಆರೋಪಿಗಳಿಗೆ ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದಂತಹ ಮಂಜುನಾಥ್ ನಾಯಕ್ ಅವರು ಲಷ್ಕರ್ ಮೊಹಲ್ಲಾದ ನಿವಾಸಿ ಮೊಹಮ್ಮದ್ ಯೂಸೂಫ್ ಎಂಬುವರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪ ಸಾಬೀತಾದ ಹಿನ್ನೆಲೆ ಇಬ್ಬರು ಆರೋಪಿಗಳಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲ 15,000 ದಂಡವನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಶನಿವಾರ ಪ್ರಕಟಣೆ ಮೂಲಕ ತಿಳಿಸಲಾಗಿದೆ