ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ, ಸಾರ್ವಜನಿಕರಿಗೆ ಸುಗಮ ಸಾರಿಗೆ ಕಲ್ಪಿಸುವ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆಗಳು ಸೇರಿದಂತೆ, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಹಾಗೂ ಇನ್ನೀತರ ಇಲಾಖೆಗಳ ಅಧೀನದ ಎಲ್ಲ ರಸ್ತೆಗಳಲ್ಲಿನ ತಗ್ಗು ಗುಂಡಿಗಳನ್ನು ಕೂಡಲೇ ಗುರುತಿಸಿ ಯುದ್ದೋಪಾದಿಯಲ್ಲಿ ರಸ್ತೆಗಳನ್ನು ಸರಿಪಡಿಸುವ ಕಾರ್ಯ ಮಾಡಬೇಕು ಎಂದು ಸೂಚನೆ ನೀಡಿದರು.