ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಗೆ ಅನುಮತಿ ನೀಡಿದ್ದನ್ನ ಖಂಡಿಸಿ, ಚಿತ್ರದುರ್ಗದಲ್ಲಿ ರಾಜ್ಯ ರೈತ ಸಂಘ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ ನಡೆಸಿದ್ದಾರೆ. ಈಚಘಟ್ಟ ಗ್ರಾಮದ ಗೋಮಾಳ ಜಮೀನಲ್ಲಿ ಖಾಸಗಿ ಸೋಲಾರ್ ಗೆ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದ ಹೊರವಲಯದ ಗೋಮಾಳದಲ್ಲಿ ಸೋಲಾರ್ ಪ್ಲಾಂಟ್ ಅನುಮತಿ ರದ್ದು ಮಾಡುವಂತೆ ರೈತರು ಆಗ್ರಹಿಸಿದ್ದಾರೆ. ಸೋಲಾರ್ ಪ್ಲಾಂಟ್ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದು, ಸೋಲಾರ್ ಪ್ಲಾಂಟ್ ಕಾಮಗಾರಿ ನಿಲ್ಲಿಸಿ ಅನುಮತಿ ಹಿಂಪಡೆಯಲು ಡಿಸಿಗೆ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಇಪ್ಪತ್ತಕ್ಕೂ ಹೆಚ್ಚು ಮಂದಿ ರೈತರು ಭಾಗಿಯಾಗಿದ್ದರು