ನಗರದಲ್ಲಿ ಸಂಚಾರ ದಟ್ಟಣೆ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್. ನಗರದ ಹೃದಯ ಭಾಗವಾಗಿರುವ ಚನ್ನಮ್ಮ ವೃತ್ತದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಅಧಿವೇಶನದ ಸಂದರ್ಭದಲ್ಲಿ ಜನರಿಗೆ, ಶಾಸಕರು, ಸಚಿವರು ಮತ್ತು ಅಧಿಕಾರಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಪಾಲಿಕೆಯು ಕೈಗೊಂಡಿರುವ ಪೂರ್ವ ಸಿದ್ಧತೆಗಳನ್ನು ಅವರು ಪರಿಶೀಲಿಸಿದರು. ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ, ನಗರದ ಚನ್ನಮ್ಮ ವೃತ್ತದಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಗುರುವಾರ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮತ್ತು ಪಾಲಿಕೆ ಆಯುಕ್ತ ಕಾರ್ತಿಕ್ ಅವರು ಪರಿಶೀಲನೆ ನಡೆಸಿದರು.