ಶಿರಹಟ್ಟಿ: ಬರಗಾಲದಲ್ಲಿ ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಿ: ಪಟ್ಟಣದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ನಿರ್ಮಲಾ ಎನ್.ಕೆ
ಬರಗಾಲದಲ್ಲಿ ಜಾನುವಾರುಗಳಿಗೆ ಮೇವು ಹಾಗೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಪಟ್ಟಣದಲ್ಲಿ ಗದಗ ಜಿಪಂ ಮುಖ್ಯ ಯೋಜನಾಧಿಕಾರಿ ನಿರ್ಮಲಾ ಎನ್.ಕೆ ಹೇಳಿದರು. ಬರಗಾಲದ ನಿಮಿತ್ತ ಕುಡಿಯುವ ನೀರು ಹಾಗೂ ದನ ಕರುಗಳಿಗೆ ಮೇವಿನ ಸಂಗ್ರಹದ ಬಗ್ಗೆ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಈ ವೇಳೆ ಮಾತನಾಡಿದ ಬರಗಾಲದ ಟಾಸ್ಕ್‌ಫೋರ್ಸ್ ಸಮಿತಿಯ ನೋಡಲ್ ಅಧಿಕಾರಿಯಾದ ಜಿಪಂ ಮುಖ್ಯ ಯೋಜನಾಧಿಕಾರಿ, ಬೇಸಿಗೆಯಲ್ಲಿ ತಾಲ್ಲೂಕಿನ ಪ್ರತಿಯೊಂದು ಗ್ರಾಪಂ ಮಟ್ಟದಲ್ಲಿ ಜಾನುವಾರುಗಳ ಹಸಿವು ನೀಗಿಸಲು ಮೇವು ಸಂಗ್ರಹ ಮಾಡಲು ಮೊದಲ ಆದ್ಯತೆ ನೀಡಿ ಎಂದರು.