ವೀರವನಿತೆ ಒನಕೆ ಓಬವ್ವನ ಸಮಯ ಪ್ರಜ್ಞೆ, ಧೈರ್ಯ ಮತ್ತು ಸಾಹಸಗಳು ಹೆಣ್ಣು ಮಕ್ಕಳಿಗೆ ಸ್ಫೂರ್ತಿದಾಯಕವಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಹೇಳಿದರು. ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನವೆಂಬರ್ 11ರಂದು ನಡೆದ ವೀರರಾಣಿ ಒನಕೆ ಓಬವ್ವನ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಎದುರಾಳಿ ಸೈನಿಕರು ಕೋಟೆಯನ್ನು ಮುತ್ತಿದಾಗ, ಮನೆಯಲ್ಲಿನ ಒನಕೆಯನ್ನೇ ಆಯುಧವಾಗಿ ಬಳಸಿ ನೂರಾರು ಸೈನಿಕರ ರುಂಡಗಳನ್ನು ಚಂಡಾಡಿ, ಕೋಟೆಯನ್ನು ರಕ್ಷಿಸಿ ವೀರನಾರಿ ಎನ್ನುವ ಬಿರುದು ಪಡೆದುಕೊಂಡರು.