ಧಾರವಾಡ: ಧಾರವಾಡ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ
ಧಾರವಾಡ ಕೃಷಿ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಧಿಕೃತ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಧಾರವಾಡ ಕೃಷಿ ಮೇಳ ರೈತರ ಜಾತ್ರೆ ಎಂದೇ ಪ್ರಸಿದ್ಧಿ ಪಡೆದಿದೆ. ಇಲ್ಲಿ ರೈತ ಸ್ನೇಹಿ ವಾತಾವರಣ ಸೃಷ್ಟಿಯಾಗಿದೆ. ಎಲ್ಲ ರೈತರು ಕೃಷಿ ಮೇಳದ ಸದ್ದುಪಯೋಗ ಪಡೆಯಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಸಂತೋಷ ಲಾಡ್, ಶಾಸಕ