ರಾಮನಗರ: ಪ್ರತಿಭಟನಾನಿರತ ವಿಶೇಷಚೇತನರ ಅಹವಾಲು ಆಲಿಸಿದ ಸಂಸದ ಡಾ. ಸಿ.ಎನ್. ಮಂಜುನಾಥ್
ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಶೇಷಚೇತನರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಸಂಸದ ಡಾ. ಸಿ.ಎನ್. ಮಂಜುನಾಥ್ ಭೇಟಿ ನೀಡಿದ್ದಾರೆ. ಮಾಶಾಸನ ಬಿಡುಗಡೆ, ಹೆಚ್ಚಳ ಮತ್ತು ಸರ್ಕಾರಿ ಸೌಲಭ್ಯಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸುವ ಭರವಸೆಯನ್ನು ಸಂಸದರು ನೀಡಿದ್ದಾರೆ.