ಬಾಗಲಕೋಟೆ: ನಗರದಲ್ಲಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯರು ಕೆಲವೇ ಗಂಟೆಗಳಲ್ಲಿ ರಕ್ಷಣೆ,ನಗರದಲ್ಲಿ ಎಸ್ಪಿ ಸಿದ್ಧಾರ್ಥ ಗೋಯಲ್
ಬಾಗಲಕೋಟೆ ನಗರದ ಹಾಸ್ಟೆಲ್ ನಲ್ಲಿ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿನಿಯರನ್ನ ವಿಜಯಪುರದಲ್ಲಿ ರಕ್ಷಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್ ತಿಳಿಸಿದ್ದಾರೆ.ಬಾಗಲಕೋಟೆ ನಗರದಲ್ಲಿ ಮಾತನಾಡಿರುವ ಅವರು ,ಕಳೆದ ದಿನ ಸಂಜೆ ಏಳು ಗಂಟೆ ಸಂದರ್ಭದಲ್ಲಿ ಬಾಗಲಕೋಟೆ ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದರು,ಹಾಸ್ಟೆಲ್ ಸಿಬ್ಬಂದಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ವಿದ್ಯಾರ್ಥಿನಿಯರನ್ನ ಕೆಲವೇ ಗಂಟೆಗಳಲ್ಲಿ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.